ಬುಧವಾರ, ನವೆಂಬರ್ 25, 2020
21 °C

ಜೊತೆಯಾಗಿ ಕಾಣಿಸಿಕೊಂಡ ರಮೇಶ ಜಾರಕಿಹೊಳಿ – ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ರಾಜಕೀಯವಾಗಿ ಉತ್ತರ–ದಕ್ಷಿಣ ದ್ರುವದಲ್ಲಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಲ್ಲಿನ ಡಿಸಿಸಿ ಬ್ಯಾಂಕ್ ಚುನಾವಣೆಯ ವಿಷಯದಲ್ಲಿ ಹಲವು ವರ್ಷಗಳ ನಂತರ ಶನಿವಾರ ಒಟ್ಟಾಗಿ ಕಾಣಿಸಿಕೊಡರು.

ಡಿಸಿಸಿ ಬ್ಯಾಂಕ್‌ನಲ್ಲಿ ಮುಖಾಮುಖಿಯಾದ ಇಬ್ಬರೂ ಒಂದೇ ಸೋಪಾದಲ್ಲಿ ಕುಳಿತುಕೊಂಡು ಕೆಲಕಾಲ ಮಾತುಕತೆ ನಡೆಸಿದ್ದು ಗಮನಸೆಳೆಯಿತು. ಈ ಇಬ್ಬರೂ ನಾಯಕರು ಒಂದೇ ವೇದಿಕೆಗೆ ಬರಬೇಕು ಮತ್ತು ವೈಮನಸ್ಸು ಮರೆತು ಒಂದಾಗಬೇಕು ಎಂದು ಬಿಜೆಪಿ ವರಿಷ್ಠರು ಈಚೆಗೆ ಸೂಚಿಸಿದ್ದರು. ಅದರಂತೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡರು.

ಕಾಂಗ್ರೆಸ್‌ನಲ್ಲಿದ್ದಾಗ ಅಥಣಿ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡಿದ್ದ ದಿನಗಳಿಂದಲೂ ರಮೇಶ ವಿರುದ್ಧ ಸವದಿ  ಮುನಿಸಿಕೊಂಡಿದ್ದರು. ರಮೇಶ ಬಿಜೆಪಿಗೆ ಸೇರಿದ್ದರೂ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಈಗ, ಹಳೆ ವೈಷಮ್ಯ ಮರೆತಿರುವ ಸಂದೇಶ  ರವಾನಿಸಿದ್ದಾರೆ. ‘ನಾವಿಬ್ಬರೂ ಹಿಂದಿನಿಂದಲೂ ಒಂದೇ ಆಗಿದ್ದೆವು’ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅವಿರೋಧ ಆಯ್ಕೆಗೆ ಶ್ರಮಿಸಬೇಕು ಎಂದು ಪಕ್ಷದ ವರಿಷ್ಠರು ಜಿಲ್ಲೆಯ ಬಿಜೆಪಿ ನಾಯಕರಿಗೆ ಸೂಚಿಸಿದ್ದರು. ಆದರೆ, 16 ನಿರ್ದೇಶಕ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಮಾತ್ರ ಅವಿರೋಧ ಆಯ್ಕೆ ಆಗುವಂತೆ ನೋಡಿಕೊಳ್ಳುವಲ್ಲಿ ಮುಖಂಡರು ಯಶಸ್ವಿಯಾಗಿದ್ದಾರಷ್ಟೆ. ಮೂರು ಸ್ಥಾನಗಳಿಗೆ ನ. 6ರಂದು ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು