ಗುರುವಾರ , ಅಕ್ಟೋಬರ್ 1, 2020
26 °C
ಪ್ರವಾಹ ಮತ್ತು ಕೋವಿಡ್- 19 ನಿಯಂತ್ರಣ: ಪರಿಶೀಲನಾ ಸಭೆ

ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

’ನೀರಿನ ಪ್ರಮಾಣ ಹೆಚ್ಚಳವಾದರೆ ಮಹಾರಾಷ್ಟ್ರ ತಕ್ಷಣವೇ ನೀರು‌ ಬಿಡುಗಡೆ ಮಾಡುತ್ತದೆ. ಅದಕ್ಕಾಗಿ ನಿರಂತರ ನಿಗಾ ವಹಿಸಬೇಕಾಗಿದೆ. ವಿಶೇಷವಾಗಿ ಕೊಯ್ನಾ ಮತ್ತು ರಾಜ್ಯದ ಆಲಮಟ್ಟಿ ಜಲಾಶಯಗಳ ಬಗ್ಗೆ ಉಭಯ ರಾಜ್ಯಗಳ ಅಧಿಕಾರಿಗಳು ಸತತ‌ ಮಾಹಿತಿ ವಿನಿಮಯ ಮತ್ತು ಸಮನ್ವಯತೆ ಸಾಧಿಸಬೇಕು. ಜಿಲ್ಲೆಯ ಜಲಾಶಯಗಳಿಂದ ಮೊದಲು‌ ಕೆರೆಗಳನ್ನು ತುಂಬಿಸಬೇಕು. ಇದಾದ ಬಳಿಕವೇ ಮುಂದೆ ನೀರು ಬಿಡುಗಡೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು