ಬುಧವಾರ, ಸೆಪ್ಟೆಂಬರ್ 22, 2021
23 °C

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ: ಬಿಜೆಪಿ ಪ್ರಮುಖರ ಸಭೆ; ರಮೇಶ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿ ಪ್ರಮುಖರ ಸಭೆ ಇಲ್ಲಿ ಸೋಮವಾರ ಜರುಗಿದೆ.

ಬೆಳಗಾವಿ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪಕ್ಷದ ಪ್ರಮುಖರ ಸಭೆ ಗೋಪ್ಯವಾಗಿ ನಡೆದಿರುವುದು ಹಲವು ವಿಶ್ಲೇಷಣೆಗೆ ಮತ್ತು ಚರ್ಚೆಗಳಿಗೆ ಗ್ರಾಸವಾಗಿದೆ.

ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಯಲ್ಲಿ ಸಚಿವ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಮಹೇಶ ಕುಮಠಳ್ಳಿ, ದುರ್ಯೋಧನ ಐಹೊಳೆ, ಪಿ. ರಾಜೀವ, ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಿದ್ದರು.

ಮುಖ್ಯವಾಗಿ, ಮುಂಬರುವ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಈ ಭಾಗದ ಪ್ರಭಾವಿಯಾದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಭೆಯಿಂದ ದೂರ ಉಳಿದಿದ್ದು, ಕುತೂಹಲ ಮೂಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು