ಬೆಳಗಾವಿ: ‘ಡಿಸೆಂಬರ್ನಲ್ಲಿ ಬಿಜೆಪಿಯಲ್ಲಿ ಕ್ರಾಂತಿ ಆಗುತ್ತದೆಯೋ ಇಲ್ಲವೋ ನಾನು ಹೇಳುವುದಿಲ್ಲ. ಆದರೆ, ವಿಜಯೇಂದ್ರ ನಾಯಕತ್ವ ಒಪ್ಪುವ ಮಾತೇ ಇಲ್ಲ. ಈ ಬಗ್ಗೆ ಹೈಕಮಾಂಡ್ ಮುಂದೆ ಏನು ಹೇಳಬೇಕೋ ಹೇಳಿದ್ದೇವೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ಹೇಗೆ ಒಪ್ಪುವುದಿಲ್ಲವೋ ಹಾಗೆಯೇ ವಿಜಯೇಂದ್ರನನ್ನೂ ಒಪ್ಪುವುದಿಲ್ಲ’ ಎಂದರು.

‘ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಆಗಲು ಸಿದ್ದರಾಮಯ್ಯ ಕಾರಣ. ಈಗಲೂ ಸಿದ್ದರಾಮಯ್ಯ ಅವರಿಂದಲೇ ಸರ್ಕಾರ ಉರುಳುತ್ತದೆ’ ಎಂಬ ದೇವೇಗೌಡರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರಮೇಶ, ‘ದೇವೇಗೌಡರು ಹಿರಿಯ ನಾಯಕರು. ಅವರಿಗೆ ನಾನು ಕೌಂಟರ್ ಮಾತನಾಡುವುದಿಲ್ಲ. ಆಗಿನ ಸಮ್ಮಿಶ್ರ ಸರ್ಕಾರ ಪತನ ಆಗಲು ಮೂಲ ಕಾರಣ ಡಿ.ಕೆ.ಶಿವಕುಮಾರ. ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿದ್ದರಿಂದ ನಾನೇ ಮುಂಚೂಣಿಯಲ್ಲಿ ನಿಂತು ಸರ್ಕಾರ ಕೆಡವಿದೆ. ಈಗ ಏನಾಗುತ್ತದೆಯೋ ಗೊತ್ತಿಲ್ಲ’ ಎಂದರು.

‘ಡಿಸಿಸಿ ಬ್ಯಾಂಕ್ ಚುನಾವಣೆ ದಿನ ರಮೇಶ ಕತ್ತಿ ವಾಲ್ಮೀಕಿ ಸಮಾಜದ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡಿದ್ದರು. ಎರಡ್ಮೂರು ದಿನಗಳ ಹಿಂದೆ ಇದೇ ಪ್ರಕರಣ ಸಂಬಂಧ ಹುಕ್ಕೇರಿ ಗ್ರೆಡ್–2 ತಹಶೀಲ್ದಾರ್ ವಾಲ್ಮೀಕಿ ಸಮಾಜ ಎಸ್ಟಿಗೆ ಬರಲ್ಲ ಎಂದು ನ್ಯಾಯಾಲಯಕ್ಕೆ ಬರೆದುಕೊಟ್ಟಿದ್ದಾರೆ. ಇದು ದೊಡ್ಡ ದುರಂತ. ಇದನ್ನು ರಮೇಶ ಕತ್ತಿ ಮಾಡಿಸಿದ್ದಾರೋ, ಇಲ್ಲವೋ ಎನ್ನುವುದು ನನಗೆ ಗೊತ್ತಿಲ್ಲ. ಆದರೆ, ಅದನ್ನು ತನಿಖೆ ಮಾಡಬೇಕು. ತಕ್ಷಣ ಹುಕ್ಕೇರಿ ಗ್ರೇಡ್-2 ತಹಶೀಲ್ದಾರ್ ಅಮಾನತು ಮಾಡಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.

‘ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನನ್ನ ಅವಶ್ಯಕತೆ ಇಲ್ಲ. ಅಲ್ಲಿ ಜನರೇ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸೋಲಿಸುತ್ತಾರೆ. ಅಥಣಿಯಲ್ಲಿ ನನ್ನ ಅವಶ್ಯಕತೆ ಇದೆ. ಹಾಗಾಗಿ, ಅಲ್ಲಿ ಕೆಲಸ ಮಾಡುತ್ತಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕುರುಬ ಸಮಾಜ ಎಸ್ಟಿಗೆ ಸೇರಿಸಲು ನನ್ನ ಸ್ವಾಗತ ಇದೆ. ಆದರೆ, ಅದಕ್ಕೆ ತಕ್ಕ ಹಾಗೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದರು.

‘ಸಮಾಜಕ್ಕೆ ಅನ್ಯಾಯವಾದರೆ ಹೋರಾಟ’

‘2004–05ರಲ್ಲಿ ಸಿದ್ದರಾಮಯ್ಯ ಸತೀಶ ಜಾರಕಿಹೊಳಿ ಎಚ್.ಸಿ.ಮಹಾದೇವಪ್ಪ ಸೇರಿ ಪಕ್ಷಾತೀತವಾಗಿ ನಾನು ಕೂಡ ಅಹಿಂದ ಸಂಘಟನೆಗೆ ಬೆಂಬಲ ನೀಡಿದ್ದೆ. ಆ ಸಂಘಟನೆ ಮೂಲಕವೇ ಇಂದು ಹಿಂದುಳಿದ ವರ್ಗದ ಸಿದ್ದರಾಮಯ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಸತೀಶ ಜಾರಕಿಹೊಳಿ ಪರಮೇಶ್ವರ ಸಚಿವರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಆದರೂ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಿದೆ. ಹಾಗಾಗಿ ಹಿಂದುಳಿದ ದಲಿತ ಸಮುದಾಯದ ರಕ್ಷಣೆಗೆ ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯ ಮುಂದೆ ಬರಬೇಕು. ಆ ನಿಟ್ಟಿನಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಜೊತೆಗೆ ನಮ್ಮ ಸಮಾಜದ ಸ್ವಾಮೀಜಿ ಮುಖಂಡರ ಜೊತೆಗೆ ಮಾತನಾಡಿ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಧಿವೇಶನದಲ್ಲೂ ಗಲಾಟೆ ಮಾಡುತ್ತೇನೆ’ ಎಂದು ರಮೇಶ ಜಾರಕಿಹೊಳಿ ಎಚ್ಚರಿಕೆ ನೀಡಿದರು. ‘ಈ ಹಿಂದೆ ವಾಲ್ಮೀಕಿ ಸಮಾಜಕ್ಕೆ ಅನ್ಯಾಯ ಆದಾಗ ಪಾದಯಾತ್ರೆ ಮಾಡಲು ಅನುಮತಿ ಕೇಳಿದ್ದೆ. ನಾವು ಸರಿಯಾಗಿ ಮನವರಿಕೆ ಮಾಡಿಕೊಡಲು ಆಗದ ಹಿನ್ನೆಲೆಯಲ್ಲಿ ಹೈಕಮಾಂಡ್ ಪಾದಯಾತ್ರೆಗೆ ಅವಕಾಶ ನೀಡಿರಲಿಲ್ಲ. ಮುಂದಿನ ವಾರ ದೆಹಲಿಗೆ ಹೋಗಿ ಅಮಿತ್ ಷಾ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ವಾಲ್ಮೀಕಿ ಸಮಾಜಕ್ಕೆ ಅನ್ಯಾಯ ಆಗಿದೆ. ಹಾಗಾಗಿ ತಾವು ಇದರಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.