ಗುರುವಾರ , ಅಕ್ಟೋಬರ್ 29, 2020
27 °C

ಮೋಹನದಾಸ್ ಪೈ ಸೇರಿ ಮೂವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಅ.5ರಂದು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ತಿಳಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಈ ಬಾರಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕ್ರೀಡಾ ಹಾಗೂ ಸಮಾಜಸೇವೆ ವಿಭಾಗದಿಂದ ಕೆ. ಗೋವಿಂದರಾಜ್, ಔದ್ಯಮಿಕ ಮತ್ತು ಸಾಂಸ್ಥಿಕ ಹಣಕಾಸು ಕ್ಷೇತ್ರದಿಂದ ಮೋಹನದಾಸ್ ಪೈ ಹಾಗೂ ಧಾರ್ಮಿಕ, ಸಮಾಜೋ-ಶೈಕ್ಷಣಿಕ ಸೇವಾ ಕ್ಷೇತ್ರಕ್ಕಾಗಿ ರಾಜಯೋಗೀಂದ್ರ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯಪಾಲ ವಿ.ಆರ್. ವಾಲಾ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಭಾಗವಹಿಸುವರು. ನ್ಯಾಕ್ ನಿರ್ದೇಶಕ ಪ್ರೊ. ಎಸ್.ಸಿ. ಶರ್ಮ ಘಟಿಕೋತ್ಸವ ಭಾಷಣ ಮಾಡುವರು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು