ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

Published : 2 ಅಕ್ಟೋಬರ್ 2024, 13:34 IST
Last Updated : 2 ಅಕ್ಟೋಬರ್ 2024, 13:34 IST
ಫಾಲೋ ಮಾಡಿ
Comments

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿ‍ಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ. ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್‌ 7ರಂದು ಈ ಬಗ್ಗೆ ದೂರು ದಾಖಲಾಗಿತ್ತು. ತನಿಖಾಧಿಕಾರಿ ಎಂ.ಐ.ನಡುವಿನಮನಿ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

20 ಸಾಕ್ಷ್ಯಗಳು ಹಾಗೂ ಮುದ್ದೆಮಾಲುಗಳನ್ನು ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ಕೊಡುವಂತೆಯೂ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT