ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಾಲಕಿ ಅಪಹರಿಸಿ ಅತ್ಯಾಚಾರ, ಆರೋಪಿ ಬಂಧನ

Last Updated 4 ಡಿಸೆಂಬರ್ 2022, 8:32 IST
ಅಕ್ಷರ ಗಾತ್ರ

ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ.

ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ ಫೋನ್ ಮಾಡಿದ ನಂತರ ವಿಷಯ ಗೊತ್ತಾಗಿದೆ.

ಖಡೇಬಜಾರ್ ಎಸಿಪಿ ಚಂದ್ರಪ್ಪ ನೇತೃತ್ವದಲ್ಲಿ ಅಹಮದಾಬಾದ್‌ಗೆ ಹೋದ ವಿಶೇಷ ತಂಡ, ಆರೋಪಿಯನ್ನು ಬಂಧಿಸಿದೆ.

ಕ್ಯಾಂಪ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT