ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಅ‍ಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Published : 21 ಸೆಪ್ಟೆಂಬರ್ 2024, 14:31 IST
Last Updated : 21 ಸೆಪ್ಟೆಂಬರ್ 2024, 14:31 IST
ಫಾಲೋ ಮಾಡಿ
Comments

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.

ಮಹಾರಾಷ್ಟ್ರದ ಮೀರಜ್‌ನ ವಿಕ್ರಮ ಬಸವರಾಜ ಪಟ್ಟೇಕರ ಶಿಕ್ಷೆಗೆ ಒಳಗಾದವ.

ಮದುವೆ ಆಗುವುದಾಗಿ ನಂಬಿಸಿ ವಿಕ್ರಮನು, 2016ರ ಅ.24ರಂದು ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿದ್ದ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕರವೀರ ತಾಲ್ಲೂಕಿನ ವರಣಗಿಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನು ಬಹಿಂಗಪಡಿಸಿದಂತೆ ಜೀವ ಬೆದರಿಕೆ ಹಾಕಿದ್ದ. ಈ ಸಂಬಂಧ ಬಾಲಕಿಯ ತಂದೆ ರಾಯಬಾಗ ತಾಲ್ಲೂಕಿನ ಕುಡಚಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಬಿ.ಎಸ್‌.ಲೋಕಾಪುರ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ.‍ಪುಷ್ಪಲತಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಯು ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ಪಡೆಯುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT