ಬಾಲಕಿಯ ಅತ್ಯಾಚಾರ | ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಬುಧವಾರ, ಜೂನ್ 26, 2019
23 °C

ಬಾಲಕಿಯ ಅತ್ಯಾಚಾರ | ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Published:
Updated:

ಬೆಳಗಾವಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದ, ತಾಲ್ಲೂಕಿನ ಅಂಬೇವಾಡಿಯ ಲಕ್ಷ್ಮಿ ಗಲ್ಲಿ ನಿವಾಸಿ ಜೋತ್ಯೆಶ ಶಿವಾಜಿ ನಾವಿ (23) ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹ 22,000 ದಂಡ ವಿಧಿಸಿದೆ.

ನ್ಯಾಯಾಧೀಶ ಜಿ.ನಂಜುಂಡಯ್ಯ ಬುಧವಾರ ಆದೇಶ ನೀಡಿದರು. ಸರ್ಕಾರದ ಪರವಾಗಿ ಎಲ್‌.ವಿ. ಪಾಟೀಲ ವಾದ ಮಂಡಿಸಿದ್ದರು.

ಇಲ್ಲಿಗೆ ಸಮೀಪದ ಹಿಂಡಲಗಾ ಮುಖ್ಯರಸ್ತೆಯಲ್ಲಿ ಜೋತ್ಯೆಶನು ಹೇರ್‌ ಕಟಿಂಗ್‌ ಅಂಗಡಿ ಇಟ್ಟುಕೊಂಡಿದ್ದ. 2018ರ ಮಾರ್ಚ್‌ 9ರಂದು ಬೈಕ್‌ ಮೇಲೆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಮಹಾರಾಷ್ಟ್ರದ ಬೂದರಗಡ ತಾಲ್ಲೂಕಿನ ಶೇಲೋಳಿ ಗ್ರಾಮದಲ್ಲಿ ಒಂದು ವಾರ ಬಾಡಿಗೆ ಮನೆ ಮಾಡಿ, ಬಾಲಕಿಯನ್ನು ಇಟ್ಟಿದ್ದ. ಪ್ರತಿ ದಿನ ರಾತ್ರಿ ಅತ್ಯಾಚಾರ ಎಸಗಿದ್ದ. ಮುಂಬೈನಲ್ಲಿರುವ ತನ್ನ ಸಂಬಂಧಿಕರ ಮನೆಗೂ ಬಾಲಕಿಯನ್ನು ಕರೆದೊಯ್ದಿದ್ದ. ನಂತರ ಏಪ್ರಿಲ್‌ 5ರಂದು ಬೆಳಗಾವಿ ಬಸ್‌ ನಿಲ್ದಾಣಕ್ಕೆ ಕರೆದುಕೊಂಡು ಬಂದು, ಬಿಟ್ಟುಹೋಗಿದ್ದ ಎಂದು ತನಿಖಾಧಿಕಾರಿ ರಮೇಶ ಬಿ. ಗೋಕಾಕ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !