ಶನಿವಾರ, ಜುಲೈ 31, 2021
28 °C

ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಹಾಲಿನ ಪುಡಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಧಾಮನೆ ರಸ್ತೆಯ ನಿಜಾಮಿಯಾ ನಗರದ ಟಿಪ್ಪು ಸುಲ್ತಾನ್ ಕಾಲೊನಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ‘ಅನ್ನಭಾಗ್ಯ’ ಯೋಜನೆಯ 13 ಕ್ವಿಂಟಲ್ ಅಕ್ಕಿ ಹಾಗೂ ‘ಕ್ಷೀರಭಾಗ್ಯ’ ಯೋಜನೆಯ 85 ಕೆ.ಜಿ. ಹಾಲಿನ ಪುಡಿಯ ಪಾಕೆಟ್‌ಗಳನ್ನು ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಶನಿವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಬಾಡಿಗೆ ಮನೆ ಮಾಡಿಕೊಂಡಿದ್ದ ಆಸಿಫ್ ಕಿಲ್ಲೇದಾರ್ ಎನ್ನುವವರು ಅಕ್ರಮವಾಗಿ ಸಂಗ್ರಹಿಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸುವ ಕಾಲಕ್ಕೆ ಆರೋಪಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು