ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನ ಭಾಗ್ಯ ಅಕ್ಕಿ ಸಾಗಣೆ: ಇಬ್ಬರ ಬಂಧನ

Last Updated 10 ಜುಲೈ 2021, 4:20 IST
ಅಕ್ಷರ ಗಾತ್ರ

ಖಾನಾಪುರ: ತಾಲ್ಲೂಕಿನ ಬೀಡಿ ಗ್ರಾಮದಿಂದ ಚನ್ನಮ್ಮನ ಕಿತ್ತೂರು ಪಟ್ಟಣದತ್ತ ಸಾಗಿಸುತ್ತಿದ್ದ 25 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ನಂದಗಡ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇಲೆ ಬೀಡಿ-ಕಿತ್ತೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳ ತಪಾಸಣೆ ನಡೆಸಿದಾಗ ಬೈಲಹೊಂಗಲ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಪಡಿತರ ಅಕ್ಕಿ ಇರುವುದು ಪತ್ತೆಯಾಯಿತು. ಘಟನೆಗೆ ಸಂಬಂಧಿಸಿದಂತೆ ಚ.ಕಿತ್ತೂರು ತಾಲ್ಲೂಕಿನ ದೇಗಾಂವ ಗ್ರಾಮದ ಶಿವಾನಂದ ಕಡತನಾಳ ಮತ್ತು ಸುರೇಶ ಕಡತನಾಳ ಎಂಬುವರನ್ನು
ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT