ರಾಯಬಾಗ: ಮಡಿವಾಳ ಮಾಚಿದೇವರ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ, ಸಮುದಾಯದ ಬಾಂಧವರು ರಾಯಬಾಗ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸರ್ಕಾರ ಮಡಿವಾಳ ಮಾಚಿದೇವರ ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದು, ಸರ್ಕಾರದಿಂದ ಸಿಗಬೇಕಾದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ದೇಶದ 18 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆ ರಾಜ್ಯಗಳಲ್ಲಿ ಸಮುದಾಯದವರು ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದುವರೆದಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವುದೇ ರೀತಿಯ ಮಾನ್ಯತೆ ನೀಡದಿರುವುದು ವಿಷಾದನೀಯ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಉತ್ತರ ಕರ್ನಾಟಕದ ವಿವಿಧ ಸಂಘಟನೆಗಳು ಡಾ. ಅನ್ನಪೂರ್ಣ ವರದಿಯನ್ನು ಜಾರಿಗೆ ತರಲು ಒತ್ತಾಯಿಸುತ್ತಿದ್ದು, ರಾಜ್ಯದ 19 ಮಂತ್ರಿಗಳು ಹಾಗೂ 137 ಶಾಸಕರಿಂದ ಶಿಫಾರಸ್ಸು ಪತ್ರಗಳನ್ನು ಪಡೆದಿದ್ದರೂ, ಸರ್ಕಾರ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ದೂರಲಾಗಿದೆ.

ಗುಂಡೂರಾವ ಪರೀಟ,ಮೋಹನ ಪರೀಟ, ಮೋಹನ ಮಡಿವಾಳ, ರಾಜಕುಮಾರ ಮಡಿವಾಳ, ಸಂಜೀವಕುಮಾರ ಮಡಿವಾಳ, ರೇವಪ್ಪ ಮಡಿವಾಳ,ಸಚಿನ್ ಪರಿಟ್, ವಿಜಯ ಪರೀಟ, ಗಣೇಶ ಮಡಿವಾಳ, ರಾಜು ಮಡಿವಾಳ, ಸುನೀಲ ಮಡಿವಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-21-251987850

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.