ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಬಾಗ | ‘ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ ಬೇಸರದ ಸಂಗತಿ’

Published 12 ಜೂನ್ 2024, 14:26 IST
Last Updated 12 ಜೂನ್ 2024, 14:26 IST
ಅಕ್ಷರ ಗಾತ್ರ

ರಾಯಬಾಗ: ಸರ್ಕಾರ ಬಾಲ ಕಾರ್ಮಿಕ ಪದ್ಧತಿ ತೊಡೆದು ಹಾಕಲು ಅನೇಕ ಸವಲತ್ತುಗಳನ್ನು ನೀಡುತ್ತಿದ್ದರೂ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿರುವುದು ಬೇಸರದ ಸಂಗತಿಯಾಗಿದೆ. ಬಾಲ ಕಾರ್ಮಿಕ ಪದ್ಧತಿ ತೊಡೆದು ಹಾಕಲು ವಿವಿಧ ಇಲಾಖೆಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್ ಹೇಳಿದರು.

ಬುಧವಾರ ಪಟ್ಟಣದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಯಾರಿಗಾದರೂ ಕಂಡು ಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ದೂರನ್ನು ಸಲ್ಲಿಸಬೇಕು ಎಂದು ತಿಳಿಸಿದರು.

14 ವರ್ಷ ವಯಸ್ಸಿನ ಒಳಗಿನ ಮಕ್ಕಳನ್ನು ಬಾಲಕಾರ್ಮಿಕ ಎಂದು ಪರಿಗಣಿಸಲಾಗುತ್ತದೆ. ಸರ್ಕಾರ ಕಾನೂನು ಮೂಲಕ ಬಾಲಕಾರ್ಮಿಕನ್ನು ದುಡಿಸಿಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಿದೆ. ಈ ವಯಸ್ಸಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ವಿಶ್ವಾದ್ಯಂತ ಆಚರಿಸುತ್ತಿದೆ. ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ತೊಡೆದು ಹಾಕಲು ಎಲ್ಲರೂ ಕೈ ಜೋಡಿಸಬೇಕು ಎಂದರು.

ಡಿ.ಎಚ್.ಯಲ್ಲಟ್ಟಿ, ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ ಮಾತನಾಡಿದರು. ಉಪಾಧ್ಯಕ್ಷ ಎಸ್.ವಿ.ಪೂಜೇರಿ, ಕಾರ್ಯದರ್ಶಿ ಎಸ್.ಬಿ.ಬಿರಾದಾರಪಾಟೀಲ, ಸಿಡಿಪಿಒ ಸಂತೋಷಕುಮಾರ ಕಾಂಬಳೆ, ಉಪಪ್ರಾರ್ಚಾಯ ಬಿ.ಎಮ್.ಮಾಳಿ, ನ್ಯಾಯವಾದಿ ದೀಪಕ ದುರ್ಗನ್ನವರ, ವಿನೋದ ಪೂಜೇರಿ, ಸುಧೀರ ಕಳ್ಳೆ, ಪ್ರದೀಪ ಖಡಟ್ಟಿ ಸೇರಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.ತಾಲೂಕು ದೈಹಿಕ ಪರಿವೀಕ್ಷಕ ಎಮ್.ಪಿ.ಜಿರಗ್ಯಾಳ ನಿರೂಪಿಸಿದರು.ಶಿಕ್ಷಕ ಅಮೋಘ ನಾಯಿಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT