ಶನಿವಾರ, ಜೂನ್ 19, 2021
24 °C

ಬೆಳಗಾವಿ: ರಾಯಣ್ಣ ಪ್ರತಿಮೆ ಸ್ಥಾಪನೆ, ಸಂಧಾನ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದ ಬಗೆಹರಿಸಲು ಪೊಲೀಸರು ಮುಖಂಡರೊಂದಿಗೆ ನಡೆಸಿದ ಸಂಧಾನ ಯತ್ನ ವಿಫಲವಾಗಿದೆ.

ರಾಜ್ಯದಾದ್ಯಂತ ಗಮನಸೆಳೆದಿರುವ ಈ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಪೊಲೀಸರು ಗ್ರಾಮದ ಮುಖಂಡರು ಹಾಗೂ ಕೆಲವು ಕನ್ನಡ ಹೋರಾಟಗಾರರ ಸಭೆ ಕರೆದಿದ್ದರು.

‘ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಐದು ಗುಂಟೆ ಜಾಗ ಕೊಡಿಸುತ್ತೇವೆ. ಆ ಜಾಗದಲ್ಲಿ ಪ್ರತಿಮೆ ಪ್ರತಿಷ್ಠಾಪಿಸಿ, ಸುತ್ತಲೂ ಉದ್ಯಾನ ಅಭಿವೃದ್ಧಿಪಡಿಸಲು ಅವಕಾಶವಿದೆ’ ಎಂದು ಪೊಲೀಸರು ಸಲಹೆ ನೀಡಿದ್ದಾರೆ.

ಇದಕ್ಕೆ ಒಪ್ಪದ ರಾಯಣ್ಣನ ಅಭಿಮಾನಿಗಳು, ‘ಗ್ರಾಮದ ವೃತ್ತದಲ್ಲಿ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದೇವೆ. ಮನವಿ ಸಲ್ಲಿಸಿದ್ದೇವೆ. ಅಲ್ಲಿಯೇ ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ, ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದರು. ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಹಾಗೂ ಹಾಲುಮತ ಸಮಾಜದವರು ಬೃಹತ್ ಪ್ರತಿಭಟನೆ ನಡೆಸಿದ್ದರು. ರಾಜ್ಯದ ಹಲವು ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆದಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು