ಗುರುವಾರ , ಜೂನ್ 17, 2021
21 °C

ತನಿಖೆ ನಡೆಸಲು ಆರ್‌ಸಿಯು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಎಂ. ತ್ಯಾಗರಾಜ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತನಿಖೆ ನಡೆಸಲು ಸಿಂಡಿಕೇಟ್ ಸಭೆ ಈಚೆಗೆ ತೀರ್ಮಾನ ಕೈಗೊಂಡಿದೆ.

‘ತ್ಯಾಗರಾಜ ಅವರು ಸುಳ್ಳು ಶೈಕ್ಷಣಿಕ ಪ್ರಮಾಣಪತ್ರ ನೀಡಿ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥ ಹುದ್ದೆ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಕಾರಣದಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಜುಲೈ 23ರಂದು ಕುಲಪತಿ ಮತ್ತು ಕುಲಸಚಿವರಿಗೆ ಪತ್ರ ಬರೆದಿದ್ದರು. ಯುಜಿಸಿ ಮಾರ್ಗಸೂಚಿ ಅನುಸರಿಸುವಂತೆ ಒತ್ತಾಯಿಸಿದ್ದರು. ಇದನ್ನು ಆಧರಿಸಿ ತನಿಖೆಗೆ ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯೆಗೆ ತ್ಯಾಗರಾಜ ಲಭ್ಯವಾಗಲಿಲ್ಲ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.