ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್ಸಿಯು)ವು ತಂತ್ರಾಂಶ (ಆ್ಯಪ್)ವೊಂದನ್ನು ಅಭಿವೃದ್ಧಿಪಡಿಸಿದೆ.

ಮೌಲ್ಯಮಾಪನ ವಿಭಾಗವು ಅಭಿವೃದ್ಧಿಪಡಿಸಿರುವ ಆ್ಯಪ್ ಅನ್ನು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜುಗಳವರು, ಸ್ನಾತಕೋತ್ತರ ಕೇಂದ್ರದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.

ಅಧ್ಯಾಪಕರ ಮೌಲ್ಯಮಾಪನ ಕಾರ್ಯದ ವಿವರ, ಅದರ ಅಂಕಿ–ಅಂಶಗಳ ಕ್ರೋಢೀಕರಣ, ದಿನ ಭತ್ಯೆ, ಪ್ರಯಾಣ ಭತ್ಯೆ ಬಿಲ್ಗಳ ವಿವರ ಇರುತ್ತದೆ. ಅಧ್ಯಾಪಕರು ತಾವು ಬೋಧಿಸುವ ವಿಷಯಗಳ ಇ–ಕಂಟೆಂಟ್ಗಳನ್ನು ಒದಗಿಸಬಹುದಾಗಿದೆ. ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಹಾಗೂ ಸಾಮೂಹಿಕವಾಗಿ ಸಂದೇಶಗಳನ್ನು ತಕ್ಷಣವೇ ಒಂದೇ ಬಾರಿಗೆ ಕಳುಹಿಸಿಕೊಡಬಹುದಾಗಿದೆ. ಇಂತಹ ಇನ್ನೂ ಅನೇಕ ವಿದ್ಯಾರ್ಥಿ ಹಾಗೂ ಶಿಕ್ಷಕ ಸ್ನೇಹಿ ಸೇವೆಗಳು ಆ್ಯಪ್ನಲ್ಲಿ ಲಭ್ಯ ಇವೆ. ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ, ಕುಲಸಚಿವರಾದ ಬಸವರಾಜ ಪದ್ಮಶಾಲಿ, ಪ್ರೊ.ಎಸ್.ಎಂ. ಹುರಕಡ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ: 6363724540 / 6363739741 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.