ಮಂಗಳವಾರ, ಅಕ್ಟೋಬರ್ 20, 2020
23 °C

ಚಿನ್ನದ ಪದಕ ಕೊಡದೆ ಆರ್‌ಸಿಯು ಅವಮಾನ: ಲಕ್ಷ್ಮಿ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸದೆ ತಿರಸ್ಕರಿಸಿ  ಅವಮಾನಿಸಿದೆ’ ಎಂದು ಶಾಸಕರೂ ಆಗಿರುವ ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮನ್ನು ಭೇಟಿಯಾದ ವಿದ್ಯಾರ್ಥಿನಿ ಹಾಗೂ ಪೋಷಕರೊಂದಿಗೆ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಸುವರ್ಣ ವಿಧಾನಸೌಧದಲ್ಲಿ ನಡೆದ 8ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಸೃಷ್ಟಿ ಗ್ಯಾನಿ ಎಂಬ ವಿದ್ಯಾರ್ಥಿನಿಯು ಕ್ರಿಮಿನಾಲಜಿ ಕ್ರಿಮಿನಲ್ ಜಸ್ಟಿಸ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದರು. ಅಂತೆಯೇ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯಾ ವಿಭಾಗದಲ್ಲಿ ಚಿನ್ನದ ಪದಕಗಳಿಗೆ ಅರ್ಹತೆ ಪಡೆದಿದ್ದರೂ ವಿವಿಯು ಪರಿಗಣಿಸಿಲ್ಲ. ಇದು ಸರಿಯಲ್ಲ’ ಎಂದು ಹೇಳಿದರು.

‘ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಎನ್ನುವಂತೆ ₹ 1,070 ಡಿ.ಡಿ. ನೀಡಿ ನಿರಾಸೆಗೊಳಿಸಲಾಗಿದೆ. ಇದು ಪ್ರತಿಭೆಗಳಿಗೆ ಮಾಡಲಾದ ಅವಮಾನವಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.