ಬುಧವಾರ, ಆಗಸ್ಟ್ 10, 2022
20 °C

ತಂದೆ–ತಾಯಿ ಕಳೆದುಕೊಂಡವರಿಗೆ ಶುಲ್ಕ ವಿನಾಯಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುವ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್- 19ನಿಂದ ತಂದೆ ಹಾಗೂ ತಾಯಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಪ್ರಕಟಿಸಿದೆ.

‘ಪದವಿ, ಸ್ನಾತಕೋತ್ತರ ಪದವಿಗೆ ಈ ಶೈಕ್ಷಣಿಕ ವರ್ಷದಿಂದ ಪ್ರವೇಶ ಪಡೆಯಲಿರುವ ಮತ್ತು ಈಗಾಗಲೇ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ.

‘ವಿಶ್ವವಿದ್ಯಾಲಯದ ವ್ಯಾಪ್ತಿಯ ಮೂರು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಲಾಗುವುದು. ಇದಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ.  ಕೊರೊನಾದಿಂದ ಆಸರೆ ಕಳೆದುಕೊಂಡವರಿಗೆ ಮಾನವೀಯತೆಯ ಆಧಾರದ ಮೇಲೆ ನೆರವಾಗುತ್ತಿದ್ದೇವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು