ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಎದುರಿಸಲು ಸಜ್ಜಾಗಿ: ಅಧಿಕಾರಿಗಳಿಗೆ ರಮೇಶ ಜಾರಕಿಹೊಳಿ ಸೂಚನೆ

Last Updated 17 ಆಗಸ್ಟ್ 2020, 5:13 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

‘ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಮೂರು ದಿನಗಳಿಂದ‌ ಧಾರಾಕಾರ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯುಸೆಕ್‌ಗೂ ಹೆಚ್ಚಿನ ನೀರು ಕೃಷ್ಣಾ ನದಿಗೆ ಸೇರ್ಪಡೆ ಆಗಲಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ’ ಎಂದು ಮಾಹಿತಿ ನೀಡಿದ್ದಾರೆ.

‘ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.‌ ಹೀಗಾಗಿ, ನದಿ ತೀರದಲ್ಲಿನ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು’ ಎಂದು ಕೋರಿದ್ದಾರೆ.

‘ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀರಾವರಿ ಇಲಾಖೆ ಅಧಿಕಾರಿಗಳಿಗೆ ದಿನದ 24 ಗಂಟೆಯೂ ಕೆಲಸ ಮಾಡಲು ಸೂಚಿಸಲಾಗಿದೆ. ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂಭಾವ್ಯ ಪ್ರವಾಹ ಎದುರಿಸಲು ಎರಡು ತಿಂಗಳಿಂದ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದ್ದೇವೆ. ಜನ-ಜಾನುವಾರುಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜನರು ಜಿಲ್ಲಾಡಳಿತದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT