ಸೋಮವಾರ, ಜೂನ್ 14, 2021
22 °C

ಬೆಳಗಾವಿಯಲ್ಲಿ ತಗ್ಗಿದ ಮಳೆ, ಕೃಷ್ಣಾ ಒಳಹರಿವು 1.62 ಲಕ್ಷ ಕ್ಯುಸೆಕ್‌ಗೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಮಳೆ ಇಳಿಮುಖವಾಗಿದೆ. 

ನೆರೆಯ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಮುಂದುವರಿದಿದ್ದರಿಂದ ಕೃಷ್ಣಾ ಒಳಹರಿವು 1.62 ಲಕ್ಷ ಕ್ಯುಸೆಕ್‌ಗೆ ಹೆಚ್ಚಳವಾಗಿದೆ. ರಾಜಾಪುರ ಬ್ಯಾರೇಜ್‌ನಿಂದ 1.22 ಲಕ್ಷ ಕ್ಯುಸೆಕ್‌, ದೂಧ್‌ಗಂಗಾ ನದಿಯಿಂದ 33,264 ಕ್ಯುಸೆಕ್‌ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,62 ಲಕ್ಷ ಕ್ಯುಸೆಕ್‌ ನೀರು ಸೇರಿಕೊಳ್ಳುತ್ತಿದೆ. ನೀರು ನದಿ ಪಾತ್ರದೊಳಗೆ ಹರಿಯುತ್ತಿದೆ. 

ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ ಕೆಳಮಟ್ಟದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಜನರು ಪರ್ಯಾಯ ಮಾರ್ಗಗಳನ್ನು ಬಳಸುತ್ತಿದ್ದಾರೆ. ಮಣ್ಣಿನ ಗುಡ್ಡ ಕುಸಿದಿದ್ದರಿಂದ ಬಂದ್‌ ಆಗಿದ್ದ ಖಾನಾಪುರ– ಗೋವಾ ರಸ್ತೆ ಮಾರ್ಗ ಹಾಗೂ ರೈಲು ಮಾರ್ಗ ಇನ್ನೂ ಆರಂಭವಾಗಿಲ್ಲ.

ಮಲಪ್ರಭಾ, ಘಟಪ್ರಭಾ, ದೂಧ್‌ಗಂಗಾ, ವೇದಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳ ಹರಿವಿನ ರಭಸ ಕಡಿಮೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು