ಖಾನಾಪುರ: ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಮುಖ್ಯಾಧಿಕಾರಿ ಸಂತೋಷ ಕುರಬೆಟ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಸಮುದಾಯ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ವೇರಣೇಕರ, ಆರೋಗ್ಯ ನಿರೀಕ್ಷಕ ಪ್ರೇಮಾನಂದ ನಾಯ್ಕ, ಕಂದಾಯ ಅಧಿಕಾರಿ ರಾಜೇಶ ಜಾಂಬೋಟಿ ಹಾಗೂ ಇತರರು ಮಹಾತ್ಮಾ ಗಾಂಧಿ, ಡಾ.ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣನ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು. ಪ. ಪಂ ಸಿಬ್ಬಂದಿ, ಪೌರ ಕಾರ್ಮಿಕರು ಹಾಜರಿದ್ದರು.

ಮಂಗೇನಕೊಪ್ಪ ಗ್ರಾ.ಪಂ: ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀ ಚಲವಾದಿ ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ ಉಪಾಧ್ಯಕ್ಷ ಸಂಜೀವ ಚುಂಗಾಡಿ, ಪಿಡಿಒ ಉಸ್ಮಾನ ನದಾಫ ಸೇರಿದಂತೆ ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಹಾಗೂ ಗ್ರಾ.ಪಂ ಸದಸ್ಯರು, ಸಿಬ್ಬಂದಿ ಇದ್ದರು.

ನಾಗರಗಾಳಿ ಗ್ರಾ.ಪಂ ಕಚೇರಿ: ತಾಲ್ಲೂಕಿನ ನಾಗರಗಾಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾ.ಪಂ ಅಧ್ಯಕ್ಷೆ ಜನಾಬಾಯಿ ಬೋಡಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಪಿಡಿಒ ಬಾಲರಾಜ್ ಭಜಂತ್ರಿ, ಗ್ರಾಪಂ ಉಪಾಧ್ಯಕ್ಷೆ ರಾಜೀಮಾ ಪಾಟೀಲ ಸೇರಿದಂತೆ ಗ್ರಾ.ಪಂ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಹಾಗೂ ಗ್ರಾ.ಪಂ ಸಿಬ್ಬಂದಿ ಇದ್ದರು.

ಬಾಲಮುಕುಂದ ಶಾಲೆ: ತಾಲ್ಲೂಕಿನ ಪಾರಿಶ್ವಾಡ ಗ್ರಾಮದ ಬಾಲಮುಕುಂದ ಪ್ರೌಢಶಾಲೆಯಲ್ಲಿ ಸೋಮವಾರ ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ದ್ವಾರಕಾನಾಥ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಲತಾ ದೇಸಾಯಿ ಗಣರಾಜ್ಯ ದಿನದ ಮಹತ್ವದ ಬಗ್ಗೆ ವಿವರಿಸಿದರು. ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಕುಂಭಾರಿಕಾ ಸಂಸ್ಥೆ: ಸ್ಥಳೀಯ ಕೇಂದ್ರೀಯ ಗ್ರಾಮೀಣ ಕುಂಭಾರಿಕಾ ಸಂಸ್ಥೆಯ ಆವರಣದಲ್ಲಿ ಸೋಮವಾರ ನಡೆದ ರಾಷ್ಟ್ರಧ್ವಜಾರೋಹಣವನ್ನು ಸಂಸ್ಥೆಯ ಹಿರಿಯ ಅಧಿಕಾರಿ ಎಸ್.ಎನ್ ದೇಶಪಾಂಡೆ ನೆರವೇರಿಸಿದರು. ಶ್ರೀಕಾಂತ ಪಾಟೀಲ, ವೆಂಕಟೇಶ ಕುಂಬಾರ, ಉಮಾಕಾಂತ, ಸೋಮ ಕುಂಬಾರ, ದೀಪಾ ಚೆಟ್ಟಿ, ಗಣೇಶ, ಸಾವಂತ ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.