ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಡಿ. 24ರಂದು ನಗರದಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡುವಂತೆ ಶ್ರೀರಾಮ ಸೇನೆ ಹಿಂದೂಸ್ತಾನ ಸಂಘಟನೆಯ ಪದಾಧಿಕಾರಿಗಳು ಗುರುವಾರ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಅವರಿಗೆ ಮನವಿ ಸಲ್ಲಿಸಿದರು.

‘ದೇಶಕ್ಕೆ ಈ ಕಾಯ್ದೆಯ ಅಗತ್ಯವಿದೆ. ಕೇಂದ್ರಸರ್ಕಾರಜಾರಿಗೊಳಿಸಿರುವ ಕಾಯ್ದೆ ಕುರಿತು ಸಮರ್ಪಕ ಮಾಹಿತಿ ಇಲ್ಲದವರು ವಿರೋಧ ಮಾಡುತ್ತಿದ್ದಾರೆ. ವಿರೋಧಿಸುವವರು ಕಾಯ್ದೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಧರ್ಮವೀರ ಸಂಭಾಜಿ ವೃತ್ತದಿಂದ ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಶನಿವಾರ ಕೂಟ, ಕಾಕತಿವೇಸ್, ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಅನುಮತಿ ನೀಡಬೇಕು’ ಎಂದು ಕೋರಿದ್ದಾರೆ.

ಸಂಘಟನೆಯ ಅಧ್ಯಕ್ಷ ರಮಾಕಾಂತ ಕೊಂಡಸ್ಕರ, ವಿನಾಯಕ ಪಾಟೀಲ, ಭರತ ಪಾಟೀಲ, ಬಲವಂತ ಶಿಂದೋಳ್ಕರ, ಶ್ರೀಕಾಂತ ಕೆ., ರಾಜೇಂದ್ರ ಬೈಲೂರ, ರಾಹುಲ ಬಡಸ್ಕರ, ಪರುಶರಾಮ ಪಾಖರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.