ಬೈಲಹೊಂಗಲ: ‘ಬೈಲಹೊಂಗಲ ಹಾಗೂ ಕಿತ್ತೂರು ಮತಕ್ಷೇತ್ರ ವ್ಯಾಪ್ತಿಯ ಎಲ್ಮ ಲಗಳಲ್ಲಿ ಮಳೆಯಿಂದಾಗುವ ಯಾವುದೇ ತರಹದ ಹಾನಿ, ಸಮಸ್ಯೆಗಳ ಕುರಿತು ಜಂಟಿ ಸಮೀಕ್ಷೆ ನಡೆಸಿ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು’ ಎಂದು ಶಾಸಕರಾದ ಮಹಾಂತೇಶ ಕೌಜಲಗಿ, ಚನ್ನಮ್ಮನ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಬೈಲಹೊಂಗಲ ಹಾಗೂ ಚನ್ನಮ್ಮನ ಕಿತ್ತೂರ ಮತಕ್ಷೇತ್ರದ ಪ್ರವಾಹ ನಿಯಂತ್ರಣ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಲುಷಿತ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಸರ ವಹಿಸಬೇಕು. ಮನೆಗಳು ಬಿದ್ದು ಜೀವ ಹಾನಿಗೊಳಗಾಗುವ ಬಗ್ಗೆ ಮುಂಚಿತವಾಗಿ ಸಭೆ ಮಾಡಿ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳೀಯ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು’ ಎಂದು ಹೇಳಿದರು.

ತಹಶೀಲ್ದಾರ್ ಎಚ್.ಎನ್.ಶಿರಹಟ್ಟಿ ಮಾತನಾಡಿ, ‘ಎರಡೂ ಮತಕ್ಷೇತ್ರಗಳಲ್ಲಿ ಪ್ರವಾಹ ನಿಯಂತ್ರಣ ಕುರಿತು ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒ, ನೋಡಲ್ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ. ಅಗತ್ಯ ಕ್ರಮಗಳನ್ನು ಜರುಗಿಸಲಾಗಿದೆ’ ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ಸವದತ್ತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.