ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾ ಪರಿವರ್ತನ ಪಕ್ಷದ ನೋಂದಣಿ ಪ್ರಕ್ರಿಯೆ ಪೂರ್ಣ

Last Updated 12 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಜಾ ಪರಿವರ್ತನ ಪಕ್ಷದ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಅಧಿಕೃತ ಚಿಹ್ನೆ ನೀಡಲಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ, ಜಮಖಂಡಿ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಪಕ್ಷದ ಅಧ್ಯಕ್ಷ ಬಿ.ಗೋಪಾಲ ತಿಳಿಸಿದರು.

ಅಕ್ಟೋಬರ್‌ನಲ್ಲಿ ಪಕ್ಷದ ನೋಂದಣಿಗೆ ಅರ್ಜಿ ಸಲ್ಲಿಸಲಾಗಿತ್ತಾದರೂ, ಪ್ರಕ್ರಿಯೆ ಇದೀಗ ಪೂರ್ಣಗೊಂಡಿದೆ ಎಂದು ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದ 25 ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿ ಎಂಬ ಬೇಡಿಕೆಯನ್ನು ಕಾರ್ಯಕರ್ತರು ಇರಿಸಿದ್ದಾರೆ. ಇದೇ 18ರಂದು ಬಾಗಲಕೋಟೆಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಅಂದೇ ಸ್ಪರ್ಧೆಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸರ್ಕಾರ ರಚಿಸುವ ಪ್ರಬಲ ಅಸ್ತ್ರವಾದ ಮತವನ್ನು ಆಮಿಷಕ್ಕೆ ಬಲಿಯಾಗಿ ದುಡ್ಡಿಗೆ ಮಾರಾಟ ಮಾಡಿಕೊಳ್ಳುವುದು ಸರಿಯಲ್ಲ ಎಂದು ಡಾ. ಬಿ.ಆರ್‌. ಅಂಬೇಡ್ಕರ್‌ ಹೇಳಿದ್ದಾರೆ. ಮತ ಮಾರಾಟದಿಂದ ಜನ ಭ್ರಷ್ಟರಾದರೆ, ಮತ ಖರೀದಿಸುವ ಭ್ರಷ್ಟ ರಾಜಕಾರಣಿ ಮತ್ತಷ್ಟು ಭ್ರಷ್ಟನಾಗುತ್ತಾನೆ. ಹಾಗಾಗಿ, ಮತ ಮಾರಾಟ ಪ್ರಕ್ರಿಯೆ ನಿಂತರೆ ಮಾತ್ರ ಬಡವರ ಪರ ಸರ್ಕಾರ ಸ್ಥಾಪನೆಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT