ಭಾನುವಾರ, ಸೆಪ್ಟೆಂಬರ್ 15, 2019
30 °C

‘ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಿ’

Published:
Updated:
Prajavani

ಬೆಳಗಾವಿ: ‘ವಿದ್ಯಾರ್ಥಿಗಳು ಅಂಕ ಗಳಿಕೆಯೊಂದಿಗೆ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ವಿಜ್ಞಾನಿ ಡಾ.ಸುಬರ್ಣಾ ರಾಯ್ ಸಲಹೆ ನೀಡಿದರು.

ಇಲ್ಲಿನ ರಾಜಾ ಲಖಮಗೌಡ ವಿಜ್ಞಾನ ಪದವಿ ಹಾಗೂ ಪಿಯು ಕಾಲೇಜುಗಳ ಕ್ರೀಡಾ, ಸಾಂಸ್ಕೃತಿಕ ಮತ್ತು ವಿವಿಧ ಸಂಘಗಳ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಅರ್ಪಣಾ ಮನೋಭಾವದಿಂದ ಅಧ್ಯಯನ ಮಾಡಬೇಕು. ಕರ್ತವ್ಯಗಳನ್ನು ಪ್ರತಿದಿನ ತಪ್ಪದೇ ನಿರ್ವಹಿಸಬೇಕು. ಸಂಶೋಧನೆ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ವಿ.ಡಿ. ಯಳಮಲಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪಿಯು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ಪ್ರತೀಕ ಹಾಗೂ ತಂಡದವರು ಪ್ರಾರ್ಥನಾ ಗೀತೆ ಹಾಡಿದರು. ಪಿಯು ಕಾಲೇಜು ಪ್ರಾಚಾರ್ಯ ಪ್ರೊ.ಎಸ್.ಜಿ. ನಂಜಪ್ಪನವರ ಸ್ವಾಗತಿಸಿದರು. ಉಪ-ಪ್ರಾಚಾರ್ಯರಾದ ಡಾ.ಜೆ.ಎಸ್. ಕವಳೇಕರ ಪರಿಚಯಿಸಿದರು. ನಯನಾ ಮತ್ತು ಅದಿತ್ಯ ನಿರೂಪಿಸಿದರು. ಪ್ರೊ.ದಿವ್ಯಾ ಪರುಲೇಕರ ವಂದಿಸಿದರು.

 

Post Comments (+)