ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೈಲಹೊಂಗಲ | ಕಾರುಗಳ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Published 1 ಜುಲೈ 2024, 16:03 IST
Last Updated 1 ಜುಲೈ 2024, 16:03 IST
ಅಕ್ಷರ ಗಾತ್ರ

ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಹತ್ತಿರ ಸೋಮವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡಿದ್ದಾರೆ.

ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನಜ್ಜುಗುಜ್ಜಾಗಿವೆ.

ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿ ತನಿಖೆ ನಡೆಸಿದರು.

ಕಾರುಗಳ ಮುಖಾಮುಖಿ ಡಿಕ್ಕಿ: ಎಂಟು ಜನರು ಗಂಭೀರ ಗಾಯ
ಕಾರುಗಳ ಮುಖಾಮುಖಿ ಡಿಕ್ಕಿ: ಎಂಟು ಜನರು ಗಂಭೀರ ಗಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT