ಬೆಳಗಾವಿ: ಇಲ್ಲಿನ ಕೋಟೆ ರಸ್ತೆ, ಫುಲಭಾಗ್ ಗಲ್ಲಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ ಬುಧವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ‘ಈ ರಸ್ತೆಗಳಲ್ಲಿ ಬಹಳಷ್ಟು ಗುಂಡಿ ಬಿದ್ದಿದ್ದರಿಂದ ಸಂಚಾರಕ್ಕೆ ತೊಡಕಾಗಿತ್ತು. ಈ ಸಮಸ್ಯೆ ಬಗೆಹರಿಸುವ ತುರ್ತು ಅಗತ್ಯವಿತ್ತು. ಹಾಗಾಗಿ ಮುಖ್ಯಮಂತ್ರಿಗಳ ವಿಶೇಷ ನಿಧಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಗುರುವಾರದಿಂದ ಕಾಮಗಾರಿ ನಡೆಯಲಿದೆ’ ಎಂದರು. ಕಾಂಗ್ರೆಸ್ ಮುಖಂಡ ಅಮನ್ ಸೇಠ್ ಇದ್ದರು.

ಸತತ ಮಳೆಯಿಂದಾಗಿ ಫುಲಭಾಗ್ ಗಲ್ಲಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿನ ರಸ್ತೆಗಳು ಹಾಳಾದ ಬಗ್ಗೆ ‘ಪ್ರಜಾವಾಣಿ’ ಮೇ 28ರ ಸಂಚಿಕೆಯಲ್ಲಿ ‘ರಸ್ತೆಗಳ ಸ್ಥಿತಿ ಅಧೋಗತಿ: ಸಂಚಾರ ದುಸ್ತರ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.