ಭಾನುವಾರ, ಮೇ 22, 2022
25 °C

ಉಗಾರ: ₹ 1.25 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೋಳೆ: ಕಾಗವಾಡ ತಾಲ್ಲೂಕು ಉಗಾರ ಬುದ್ರುಕ ಗ್ರಾಮದಲ್ಲಿ ಉಗಾರ ಖುರ್ದವರೆಗೆ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ₹ 1.25 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಮಂಗಳವಾರ ಚಾಲನೆ ನೀಡಿದರು.

ಉಗಾರ ಬುದ್ರುಕ ಗ್ರಾಮದಲ್ಲಿ ₹ 48 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 4 ಕೊಠಡಿಗಳನ್ನು ಉದ್ಘಾಟಿಸಿದರು. ಮತ್ತೊಂದು ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿದರು.

‘ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು, ಎಲ್ಲ ಕೊಠಡಿಗಳನ್ನು ಸ್ಮಾರ್ಟ್‌ ಮಾಡಲಾಗುವುದು. ಇದರಿಂದ ಸರ್ಕಾರಿ ಶಾಲೆ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲಿದೆ’ ಎಂದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಭುಜಗೌಡ ಪಾಟೀಲ, ಬಿಇಒ ಎಂ.ಆರ್. ಮುಂಜೆ, ಸಿಡಿಪಿಒ ‌ಸಂಜುಕುಮಾರ ಸದಲಗೆ, ಮುಖಂಡರಾದ ಶೀತಲ ಪಾಟೀಲ, ಪ್ರಫುಲ್ಲ ಥೋರುಸೆ, ಮನೋಜ ಕುಸನಾಳೆ, ಸುನೀಲ ಶಿಂಧೆ, ಅಪ್ಪಾಸಾಬ ಚೌಗಲೆ, ಲಕ್ಷ್ಮಣ ಜಾಧವ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ಜೆ.ಎ. ಹಿರೇಮಠ, ಆರ್.ಪಿ. ಅವತಾಡೆ, ಮಲ್ಲಿಕಾರ್ಜುನ ಮಗದುಮ್ಮ, ಗುತ್ತಿಗೆದಾರ ನಾನಾಸಾಬ ಅವತಾಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು