ಗುರುವಾರ , ಫೆಬ್ರವರಿ 25, 2021
28 °C

ಹಂಗರಗಾ: ₹ 2.17 ಕೋಟಿ ರಸ್ತೆ ಕಾಮಗಾರಿಗೆ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ತಾಲ್ಲೂಕಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ₹ 2.17 ಕೋಟಿ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಕಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಪೂಜೆ ನೆರವೇರಸಿ ಚಾಲನೆ ನೀಡಿದರು.

ಹಂಗರಗಾ ಗ್ರಾಮದಿಂದ ಕಲ್ಲೆಹೋಳ ಮುಖ್ಯ ರಸ್ತೆಯವರೆಗೆ ಡಾಂಬರೀಕರಣ ಆಗಲಿದೆ. ನಿಗದಿತ ಸಮಯದಲ್ಲಿ ಮುಗಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

‘ಅಭಿವೃದ್ಧಿ ಕೆಲಸಗಳು ನಿಲ್ಲಬಾರದೆನ್ನುವ ಕಾರಣಕ್ಕೆ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದೇನೆ. ಜನಪ್ರತಿನಿಧಿಯಾಗಿ ನನ್ನ ಕರ್ತವ್ಯವನ್ನು ಸಾಧ್ಯವಾದಷ್ಟರ ಮಟ್ಟಿಗೆ ನಿರ್ವಹಿಸುತ್ತಿದ್ದೇನೆ. ಚುನಾವಣೆಗೆ ಮುನ್ನ ಕೊಟ್ಟರುವ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ಜನರು ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದರು.

ಗ್ರಾಮದ ಹಿರಿಯರು, ಮುಖಂಡ ಯುವರಾಜ ಕದಂ ಹಾಗೂ ಗ್ರಾಮಸ್ಥರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು