ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋವರ್ಸ್, ರೇಂಜರ್ಸ್: ವಿದ್ಯಾರ್ಥಿಗಳ ಸಾಧನೆ

Last Updated 10 ಆಗಸ್ಟ್ 2021, 10:25 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಪಾಶ್ಚಾಪೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರೋವರ್ಸ್ ಹಾಗೂ ರೇಂಜರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾರತ್‌ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಡಾ.ಅನಿಲ್ ಜೈನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಬಿಕಾಂ ಅಂತಿಮ ವರ್ಷದ ಶಿವಲಿಂಗ ಗಾಣದಾರ, ಮೃತ್ಯುಂಜಯ ಮಠದ, ಚೇತನ ಸನದಿ, ದಯಾನಂದ ಗೌರಿ ಮತ್ತು ರೇಂಜರ್ಸ್‌ಗಳಾದ ಲಕ್ಷ್ಮಿಶ್ರೀ ಇರಾಗಾರ, ಸವಿತಾ ಪಾಟೀಲ, ಬಸವ್ವ ಕಿಚಡಿ ಮತ್ತು ಕಾವೇರಿ ಕುಡಜೋಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಹೆಚ್ಚುವರಿ ಮುಖ್ಯ ಆಯುಕ್ತ ಎಂ.ಎ. ಖಾಲೀದ್, ಕರ್ನಾಟಕ ಸಂಸ್ಥೆಯ ಉಪಾಧ್ಯಕ್ಷ ಎಸ್.ಸುರೇಶ್‌ಕುಮಾರ್, ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಭಾಗವಹಿಸಿದ್ದರು.

ರೋವರ್ಸ್ ವಿಭಾಗದ ಮುಖ್ಯಸ್ಥ ಯಲ್ಲಪ್ಪ ಮುಗಳಿಹಾಳ ಮತ್ತು ರೇಂಜರ್ಸ್ ವಿಭಾಗದ ಮುಖ್ಯಸ್ಥೆ ಪಿ.ಕೆ. ಶಶಿರೇಖಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ತಂಡವನ್ನು ಪ್ರಾಚಾರ್ಯ ಬಿ.ವೈ. ಶಿರಹಟ್ಟಿ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT