ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಮ್ಮನ ಕಿತ್ತೂರು: ₹11.60 ಲಕ್ಷ ಮೌಲ್ಯದ ಹಣ, ಆಭರಣ ಕಳವು

Published 9 ಜುಲೈ 2024, 15:54 IST
Last Updated 9 ಜುಲೈ 2024, 15:54 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು: ಇಲ್ಲಿಯ ವಿದ್ಯಾಗಿರಿಯಲ್ಲಿರುವ ವರ್ತಕ ಶಂಕರ ಇಟಗಿ ಅವರ ಮನೆಯ ಹಿತ್ತಲು ಬಾಗಿಲು ಮುರಿದು ಮನೆಯಲ್ಲಿದ್ದ 11.60 ಲಕ್ಷ ಮೌಲ್ಯದ ಆಭರಣ ಮತ್ತು ಹಣವನ್ನು ಕಳವು ಮಾಡಿದ ಘಟನೆ ಸೋಮವಾರ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು, ಹಿತ್ತಲು ಬಾಗಿಲ ಮುರಿದು ನಾಲ್ಕು ಅಲ್ಮೇರಾಗಳ ಬಾಗಿಲು ಮುರಿದು ಅವುಗಳಲ್ಲಿಟ್ಟಿದ್ದ 100 ಗ್ರಾಂ ಚಿನ್ನಾಭರಣ, ಅರ್ಧ ಕೆ.ಜಿ ಬೆಳ್ಳಿ ಆಭರಣ ಹಾಗೂ 5.30 ಲಕ್ಷ ನಗದು ಕಳವು ಮಾಡಿದ್ದಾರೆ.

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ಮತ್ತು ವಿಧಿ ವಿಜ್ಞಾನ ಪರಿಣತರ ಕರೆಸಲಾಗಿತ್ತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ, ಡಿವೈಎಸ್ಪಿ ರವಿ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT