ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ₹25 ಲಕ್ಷ ನಗದು ಕಳವು

Published 9 ಮಾರ್ಚ್ 2024, 15:54 IST
Last Updated 9 ಮಾರ್ಚ್ 2024, 15:54 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಶಾಹೂ ನಗರದ ಡಾಲರ್ಸ್‌ ಕಾಲೊನಿಯಲ್ಲಿ ಶನಿವಾರ ಹಿಂಬಾಗಿಲಿನ ಚಿಲಕ ಮುರಿದು ಮನೆಗೆ ನುಗ್ಗಿದ ಕಳ್ಳರು, ₹25 ಲಕ್ಷ ನಗದು ಇರಿಸಿದ್ದ ಬ್ಯಾಗ್‌ ಕದ್ದು ಪರಾರಿಯಾಗಿದ್ದಾರೆ.

‘ರಿಯಲ್‌ ಎಸ್ಟೇಟ್‌ ಉದ್ಯಮಿ ಮನೋಹರ ಯಳ್ಳೂರಕರ ಅವರು, ಆಸ್ತಿ ಮಾರಾಟದಿಂದ ಬಂದ ₹25 ಲಕ್ಷ ಹಣವನ್ನು ಮನೆಯ ಕಪಾಟಿನಲ್ಲಿ ತಂದಿಟ್ಟಿದ್ದರು. ಅದಕ್ಕೆ ಬೀಗ ಹಾಕಿರಲಿಲ್ಲ. ಕುಟುಂಬಸ್ಥರು ಮನೆಯಿಂದ ಹೊರಹೋದ ಹತ್ತೇ ನಿಮಿಷದಲ್ಲಿ ಕಳ್ಳತನವಾಗಿದೆ. ಪರಿಚಿತರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ತನಿಖೆ ಮುಂದುವರಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT