ಚಿಕ್ಕೋಡಿ: ರಸ್ತೆಗಳು ಸಾಕಷ್ಟು ಕೆಟ್ಟು ಹೋಗಿವೆ. ರಸ್ತೆಗಳ ದುರಸ್ತಿ ಕಾರ್ಯವನ್ನು ಕೈಗೊಂಡು ಜನರಿಗೆ ಅನುಕೂಲ ಮಾಡಿಕೊಡುವ ಅವಶ್ಯಕತೆ ಇದೆ. ಹೀಗಾಗಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸದಲಗಾ-ಬೋರಗಾಂವ ಪಟ್ಟಣದವರೆಗೆ 5 ಕಿ.ಮೀ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ದೆಹಲಿ ಸರ್ಕಾರದ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು.

ಚಿಕ್ಕೋಡಿ ತಾಲ್ಲೂಕಿನ ಜನವಾಡ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡ ಬೋರಗಾಂವ-ಸದಲಗಾವರೆಗೆ ₹ 5.25 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ‘ಕ್ಷೇತ್ರದ ಜನತೆಯ ಬೇಡಿಕೆಗೆ ಅನುಗುಣವಾಗಿ ರಸ್ತೆಗಳ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಲಾಗುತ್ತಿದೆ. ಹಾಗೆಯೇ ಸಂಪರ್ಕ ರಸ್ತೆಗಳು ಹಾಗೂ ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ’ ಎಂದರು.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಅಣ್ಣಾಸಾಹೇಬ ಹವಲೆ, ಯುವ ಮುಖಂಡ ಉತ್ತಮ ಪಾಟೀಲ, ರಾಜು ಗುಂಡಕಲ್ಲೆ, ಅರುಣ ದೇಸಾಯಿ, ಜ್ಯೋತಿಬಾ ಡೊಂಗೆ, ಬಾಳಕು ಪಾಟೀಲ, ಬೋರಗಾಂವ ಪಟ್ಟಣ ಪಂಚಾಯಿತಿ, ಸದಲಗಾ ಪುರಸಭೆ ಹಾಗೂ ಜನವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.