ಬುಧವಾರ, ಆಗಸ್ಟ್ 4, 2021
20 °C

ಬೆಳಗಾವಿಯ ಆರ್‌ಟಿ ಪಿಯು ಕಾಲೇಜು: ಪಿಯುಸಿ ಫಲಿತಾಂಶದಲ್ಲಿ ಶೇ 90.12

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಗೋವಾವೇಸ್ ಜಕ್ಕೇರಿಹೊಂಡ ಸಮೀಪದಲ್ಲಿರುವ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 90.12ರಷ್ಟು ಫಲಿತಾಂಶ ಗಳಿಸಿದೆ.

18 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 45 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 16 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉತ್ತಮ ಅಂಕ ಗಳಿಸಿರುವ ಉಜ್ಮಾಬಾನು ಪಟೇಲ (ಶೇ 95.20) ಪ್ರಥಮ, ಸಂಜನಾ ಕಡೋಲಕರ (ಶೇ 93.60) ‌ದ್ವಿತೀಯ, ಕೀರ್ತಿ ಆದಿಮನಿ (ಶೇ 91.50) ತೃತೀಯ, ಪ್ರಜ್ಞಾ ನಾಯಿಕ (ಶೇ 90.50) 4ನೇ, ಆಕಾಶ ಪಾಟೀಲ ಮತ್ತು ಸ್ಫೂರ್ತಿ ಟಕಾಯಿ (ಶೇ 90.16) 5ನೇ ಮತ್ತು ನೇಹಾ ಮೆಳವಂಕಿ  (ಶೇ 90) 6ನೇ ಸ್ಥಾನ ಪಡೆದಿದ್ದಾರೆ ಎಂದು ಪ್ರಾಂಶುಪಾಲ ಡಾ.ಸಿ.ಎನ್. ನಾಯ್ಕರ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು