ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ ಸದೃಢತೆಗೆ ವ್ಯಾಯಾಮ ಅಗತ್ಯ: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

Last Updated 21 ಆಗಸ್ಟ್ 2021, 15:41 IST
ಅಕ್ಷರ ಗಾತ್ರ

ಬೆಳಗಾವಿ: ‘ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಲು ನಿತ್ಯ ಕನಿಷ್ಠ 30 ನಿಮಿಷ ವ್ಯಾಯಾಮ, ಓಟ ಮತ್ತು ಯೋಗಾಸನ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ನೆಹರೂ ಯುವ ಕೇಂದ್ರ, ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ, ರಾಷ್ಟ್ರೀಯ ಸೇವಾ ಯೋಜನೆ, ಎಚ್‌ಪಿಸಿಎಲ್‌ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ಸದೃಢ ಭಾರತ ಓಟ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಣಿ ಚನ್ನಮ್ಮ ವೃತ್ತದಿಂದ ನೆಹರೂ ನಗರದ ಜೆಎನ್‌ಎಂಸಿವರೆಗೆ ನಡೆಯಿತು. ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಕುಲಪತಿ ಡಾ.ವಿವೇಕ ಸಾವೋಜಿ ಕೆಂಪು ಬಾವುಟ ತೋರಿಸಿ ಮುಕ್ತಾಯಗೊಳಿಸಿದರು. 75 ಮಂದಿ ಸ್ವಯಂಸೇವಕರು ಪಾಲ್ಗೊಂಡಿದ್ದರು.

ನೆಹರೂ ಯುವ ಕೇಂದ್ರದ ನಿವೃತ್ತ ಲೆಕ್ಕಾಧಿಕಾರಿ ಮತ್ತು ಕಾರ್ಯಕ್ರಮ ನಿರೀಕ್ಷಕ ಆರ್.ಆರ್. ಮುತಾಲಿಕ್ ದೇಸಾಯಿ ಪ್ರತಿಜ್ಞಾವಿಧಿ ಬೋಧಿಸಿದರು.

ಡಾ.ವಿ.ಎ ಕೋಟಿವಾಲೆ, ನೆಹರೂ ಯುವ ಕೇಂದ್ರದ ಉಪ ಪ್ರಧಾನ ವ್ಯವಸ್ಥಾಪಕ ಎಂ.ಸಂದೀಪ ರೆಡ್ಡಿ, ಎಚ್‌ಪಿಸಿಎಲ್‌ ಅಧಿಕಾರಿ ಎಸ್.ಎಸ್.ದಾಣಿ, ನಿವೃತ್ತ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಎಸ್.ಯು. ಜಮಾದಾರ, ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಅಶ್ವಿನಿ ನರಸನ್ನವರ, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರೋಹಿತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT