ಬುಧವಾರ, ಮಾರ್ಚ್ 3, 2021
26 °C

ಬೆಳಗಾವಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೆಸರು ಗದ್ದೆಯಲ್ಲಿ ಯುವಕರ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶಾಸಕ ಅಭಯ ಪಾಟೀಲ ನೇತೃತ್ವದ ‘ಪರಿವರ್ತನ ಪರಿವಾರ’ದಿಂದ ಭಾನುವಾರ ಆಯೋಜಿಸಿದ್ದ ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಮತ್ತು ಮೊಸರು ಗಡಿಗೆ ಒಡೆಯುವ ಸ್ಪರ್ಧೆಯಲ್ಲಿ ನೂರಾರು ಯುವಕರು ಪಾಲ್ಗೊಂಡಿದ್ದರು.

ತಲಾ 25 ಮಂದಿ ಒಳಗೊಂಡ 12 ತಂಡಗಳು ಮೊಸರು ಗಡಿಗೆ ಒಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. 20 ಅಡಿಗೂ ಎತ್ತರದಲ್ಲಿ ಕಟ್ಟಿದ್ದ ಗಡಿಗೆ ಒಡೆಯಲು ಯುವಕರು ಪಿರಮಿಡ್‌ ರಚಿಸಿಕೊಂಡು ಹರಸಾಹಸ ಪಡುತ್ತಿದ್ದುದು ಸಾಮಾನ್ಯವಾಗಿತ್ತು. ಹಗ್ಗಜಗ್ಗಾಟದಲ್ಲಿ 12 ತಂಡಗಳು ಪೈಪೋಟಿ ನೀಡಿದವು. ಓಟದ ಸ್ಪರ್ಧೆಯಲ್ಲಿ 80 ಮಂದಿ ಭಾಗವಹಿಸಿದ್ದರು.

‘ದಕ್ಷಿಣ ಕರ್ನಾಟಕ ಭಾಗದಲ್ಲಿ ಜನಪ್ರಿಯವಾಗಿರುವ ಈ ಕ್ರೀಡೆಯನ್ನು ಇಲ್ಲೂ ಪರಿಚಯಿಸಬೇಕು ಎನ್ನುವ ಉದ್ದೇಶದಿಂದ ಹಲವು ವರ್ಷಗಳಿಂದ ಆಯೋಜಿಸಲಾಗುತ್ತಿದೆ. ನಗರದಲ್ಲಿ ನಡೆಯುವ ಗ್ರಾಮೀಣ ಕ್ರೀಡಾಕೂಟಕ್ಕೆ ಯುವಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸ್ಪರ್ಧಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಯಶಸ್ವಿಯೂ ಆಗುತ್ತಿದೆ. ದೇಸಿ ಸಂಸ್ಕೃತಿ ಉಳಿಸುವ ಪ್ರಯತ್ನ ಇದಾಗಿದೆ’ ಎಂದು ಪಾಟೀಲ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು