ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಮಾರುಕಟ್ಟೆಯಲ್ಲಿ ಜನಜಂಗುಳಿ!

Last Updated 8 ಮೇ 2021, 12:42 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದನ್ನು ನಿಯಂತ್ರಿಸುವುದಕ್ಕೆ ಜಾರಿಗೊಳಿಸಲಾಗಿರುವ ಕರ್ಫ್ಯೂ ನಡುವೆಯೂ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಶನಿವಾರ ಜನಜಂಗುಳಿಯೇ ಕಂಡುಬಂತು.

ಮೇ 10ರಿಂದ ಲಾಕ್‌ಡೌನ್‌ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದ ಹಿನ್ನೆಲೆಯಲ್ಲಿ, ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿಬಿದ್ದರು. ಈ ವೇಳೆ, ಅಂತರವನ್ನು ಮರೆತರು. ನಗರಪಾಲಿಕೆ ಮಾರ್ಷಲ್‌ಗಳು ಹಾಗೂ ಪೊಲೀಸರ ಸೂಚನೆಯನ್ನೂ ಲೆಕ್ಕಿಸದೆ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು.

ಕರ್ಫ್ಯೂ ನಡುವೆಯೂ ರಾಣಿ ಚನ್ನಮ್ಮ ವೃತ್ತದಲ್ಲಿ ಬಹಳ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದುದ್ದನ್ನು ಗಮನಿಸಿದ ಡಿಸಿಪಿ ವಿಕ್ರಂ ಅಮಟೆ, ಪೊಲೀಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಕೆಲವು ದ್ವಿಚಕ್ರವಾಹನಗಳ ಸವಾರರನ್ನು ತಡೆದು ವಿಚಾರಿಸಿದರು. ಅನಗತ್ಯವಾಗಿ ರಸ್ತೆಗಿಳಿದಿದ್ದವರಿಗೆ ದಂಡ ವಿಧಿಸುವಂತೆ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದರು.

ಮಧ್ಯಾಹ್ನ 12ರವರೆಗೂ ನಗರದ ಬಹುತೇಕ ರಸ್ತೆಗಳಲ್ಲಿ ವಾಹನಗಳು ಕಂಡುಬಂದವು. ಬಳಿಕ ನಗರವು ಬಹುತೇಕ ಸ್ತಬ್ಧವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT