ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ.