ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17ರಿಂದ ಸಂಗೊಳ್ಳಿ ರಾಯಣ್ಣ ಉತ್ಸವ: ಶಾಸಕ ಕೌಜಲಗಿ

Published 3 ಜನವರಿ 2024, 17:00 IST
Last Updated 3 ಜನವರಿ 2024, 17:00 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಬೈಲಹೊಂಗಲ: ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ಜ.17 ಹಾಗೂ ಜ.18 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ರಾಯಣ್ಣ ಸ್ಮಾರಕ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿಯ ಉತ್ಸವಕ್ಕೆ ಸರ್ಕಾರ ₹1 ಕೋಟಿ ಅನುದಾನ ಬಿಡುಗಡೆ ಮಾಡಲಿದೆ. ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ರಾಕ್ ಗಾರ್ಡನ್, ರಸ್ತೆ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ‘ಈ ಬಾರಿ ಉತ್ಸವಕ್ಕೆ ₹1 ಕೋಟಿ ಅನುದಾನ ಲಭಿಸಿದೆ. ಇದರಿಂದ ಹೊಸ, ಹೊಸ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಲಿದೆ. ಉತ್ಸವದ ಯಶಸ್ಸಿಗಾಗಿ 13 ಉಪ ಸಮಿತಿಗಳನ್ನು ರಚಿಸಲಾಗುವುದು. ಸಮಿತಿಯಲ್ಲಿ ಹೆಸರು ನೋಂದಾಯಿಸಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗುವುದು’ ಎಂದರು.

ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮುಂಬರುವ ವರ್ಷಗಳಲ್ಲಿ ಜನವರಿ 12 ಹಾಗೂ 13ರಂದು ಸಂಗೊಳ್ಳಿ ಉತ್ಸವ ಆಚರಿಸಬೇಕು ಎಂದು ಸಲಹೆ ನೀಡಿದರು.

ಪ್ರಮುಖರಾದ ಮಲ್ಲಿಕಾರ್ಜುನ ಕುಡೊಳ್ಳಿ, ಉಮೇಶ ಲಾಳ, ಅರುಣ ಯಲಿಗಾರ, ಬಸವರಾಜ ಕೊಡ್ಲಿ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಲ್ಲೇಶ ಹೊರಪೇಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ‌ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಚಚಡಿ, ಉಪಾಧ್ಯಕ್ಷ ಫಕೀರಪ್ಪ ಕುರಿ, ಅನಿಲ ಮ್ಯಾಕಲಮರ್ಡಿ ಇದ್ದರು. ಸಂಶೋಧಕ ಬಸವರಾಜ ಕಮತ ನಿರೂಪಿಸಿದರು. ತಹಶೀಲ್ದಾರ್‌ ಸಚ್ಚಿದಾನಂದ ಕೊಚನೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT