ಬೆಳಗಾವಿ: ಇಲ್ಲಿನ ಸುವರ್ಣಸೌಧದ ಎದುರು ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮೂಡಲಗಿಯ ಶ್ರೀಮಂತ ಶಿವಯೋಗಿ ಮಹಾರಾಜರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಸಂಕಲ್ಪ ಯಾತ್ರೆ’ ಭಾನುವಾರ ನಗರ ತಲುಪಿತು.

ನೂರಾರು ಮಂದಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಲಕ್ಕಣ್ಣ ಸಂಸುದ್ದಿ ಮಾತನಾಡಿ, ‘ದೆಹಲಿಯ ಸಂಸತ್ ಭವನದ ಎದುರು ರಾಣಿ ಚನ್ನಮ್ಮನ ಪ್ರತಿಮೆ ಸ್ಥಾಪಿಸಲಾಗಿದೆ. ಅಂತೆಯೇ ಸುವರ್ಣಸೌಧದ ಎದುರು ಚನ್ನಮ್ಮ ಹಾಗೂ ರಾಯಣ್ಣ ಪ್ರತಿಮೆ ಸ್ಥಾಪಿಸಬೇಕು. ಬೇಡಿಕೆ ಈಡೇರುವವೆರೆಗೂ ಹೋರಾಟ ಮುಂದುವರಿಯಲಿದೆ’ ಎಂದು ತಿಳಿಸಿದರು.

ಮುಖಂಡ ಭೀಮಪ್ಪ ಗಡಾದ, ‘ಚನ್ನಮ್ಮ ಹಾಗೂ ರಾಯಣ್ಣ ಇಬ್ಬರೂ ಆದರ್ಶಪ್ರಾಯವಾಗಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಮಹನೀಯರು. ಅವರ ಪ್ರತಿಮೆ ಸ್ಥಾಪನೆ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದರು.

ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.