ಸಂಕೇಶ್ವರ: ಶಾಂತಿ ಹಾಗೂ ಸಾಮರಸ್ಯಕ್ಕೆ ಹೆಸರಾಗಿರುವ ಸಂಕೇಶ್ವರ ಪಟ್ಟಣದಲ್ಲಿ ಹಿಂದೂ– ಮುಸ್ಲಿಮರು ಪರಸ್ಪರ ಸಹಕಾರ ಮತ್ತು ಸೌಹಾರ್ದದಿಂದ ಬಕ್ರೀದ್ ಆಚರಿಸಬೇಕು ಎಂದು ಸಿಪಿಐ ಗಣಪತಿ ಕೊಂಗನೊಳ್ಳಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಯಪ್ರಕಾಶ್ ಕರಜಗಿ ಹಾಗೂ ಮುಕ್ತಾರ ನಧಾಪ ಮಾತನಾಡಿ, ‘ಪಟ್ಟಣದ ಜನರು ಅನ್ಯೋನ್ಯವಾಗಿ ಬದುಕುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲು ಯತ್ನಿಸುವ ಕಿಡಿಗೇಡಿಗಳ ಬಗ್ಗೆ ಪೊಲೀಸರ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.

ಮುಖಂಡ ಗಜಾನನ ಕ್ವಳ್ಳಿ ಮಾತನಾಡಿದರು. ಪ್ರಮೋದ ಹೊಸಮನಿ, ಆನಂದ ಸಂಸುದ್ದಿ, ಹರುಣ ಮುಲ್ಲಾ, ದಸ್ತಗಿರಿ ತೇರಣಿ, ಅಲ್ತಾಪ ಶಾಯನ್ನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-21-1054395408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.