ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು.

ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ– ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು. ಪರಿಣಾಮವಾಗಿ ಇಡೀ ದಿನ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡವು.

ಸಾರ್ವಜನಿಕರ ಹಿತದೃಷ್ಟಿಯಿಂದ ಮೆಡಿಕಲ್, ಹಾಲಿನ ಅಂಗಡಿ ಹಾಗೂ ಬೇಕರಿಗಳಂತಹ ಅಗತ್ಯ ಸೇವೆಗಳ ವಹಿವಾಟಿಗೆ ಯಾವುದೇ ಅಡ್ಡಿಯಿರಲಿಲ್ಲ. ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ– ವಹಿವಾಟುಗಳು ಬಂದ್ ಆಗಿದ್ದವು. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಸಕಾರಾತ್ಮಕ ಸಹಕಾರದಿಂದಾಗಿ ಇಡೀ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-691869555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.