ಸಂಕೇಶ್ವರ: ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೋಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟಿಟಿ ಟ್ರಾವೆಲ್ಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ 21 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟ್ರಾವೆಲ್ಸ್ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ.

ಇಚಲಕರಂಜಿಯಿಂದ ಗಡಹಿಂಗ್ಲಜ್ ಸಮೀಪದ ಶಿಂಧೆವಾಡಿಗೆ ಮದುವೆ ಸಮಾರಂಭದ ಅಂಗವಾಗಿ ತೆರಳುತ್ತಿದ್ದ ಟಿಟಿ ವಾಹನಕ್ಕೆ, ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ರಾವೆಲ್ಸ್ ವಾಹನವು ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ. ಪಲ್ಟಿಯಾದ ಟಿಟಿ ವಾಹನದಲ್ಲಿ ಚಾಲಕ ಸೇರಿ ಒಟ್ಟು 21 ಜನರಿದ್ದು, ಅವರಲ್ಲಿ 19 ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿದ್ದಾರೆ.

ಅಪಘಾತದ ತೀವ್ರತೆಗೆ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸಂದೀಪ್ ಕಾಮತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿ: ಅತಿವೇಗ ಹಾಗೂ ನಿಷ್ಕಾಳಜಿಯಿಂದ ವಾಹನ ಚಲಾಯಿಸಿ 11 ವರ್ಷದ ಬಾಲಕಿಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಾಹನ ಚಾಲಕನಿಗೆ ಇಲ್ಲಿನ 2ನೇ ಜೆಎಂಎಫ್ಸಿ ನ್ಯಾಯಾಲಯ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹6 ಸಾವಿರ ದಂಡ ವಿಧಿಸಿ ಬುಧವಾರ ಆದೇಶ ನೀಡಿದೆ.

ಖಾಸಗಿ ಆಸ್ಪತ್ರೆಯ ವೈದ್ಯ ಮುಂಬೈ ಮೂಲದ ಡಾ.ಮೊಹಮ್ಮದ್ ಸಲ್ಮಾನ್ ಸಲೀಂ ಪಟೇಲ್ ಶಿಕ್ಷೆಗೆ ಗುರಿಯಾದವ. 2016ರ ಫೆ.6ರಂದು ಸಂಜೆ ನಗರದಲ್ಲಿನ ಕೆಪಿಟಿಸಿಎಲ್ ಹಾಲ್ನಿಂದ ಆರ್.ಎನ್. ಶೆಟ್ಟಿ ಕಾಲೇಜ್ ಕಡೆಗೆ ಹೋಗುವ ರಸ್ತೆಯಲ್ಲಿ ಚಲಾಯಿಸುತ್ತಿದ್ದ ಕಾರು ಡಾ.ಮೊಹಮ್ಮದ್ ಸಲ್ಮಾನನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಿಂತಿದ್ದ ಸೃಷ್ಟಿ ನಾವಲಗಿ ಎಂಬ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.

ವಿಚಾರಣೆ ನಡೆಸಿದ ನ್ಯಾಯಾಧೀಶ ಸಿ.ಗುರುಪ್ರಸಾದ್ ಅವರು ಅಪರಾಧಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕ ಮಹಾಂತೇಶ ಚಳಕೊಪ್ಪ ವಾದ ಮಂಡಿಸಿದ್ದರು.

ಬೆಳಗಾವಿ: ನಗರದಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಗಣೇಶಪುರದ ನಿವಾಸಿ ಗಂಗಾರಾಮ ಪರುಶರಾಮ ಸಿಂಗನಗುಡಿ (24) ಹಾಗೂ ಅನಗೋಳ ನಿವಾಸಿ ಸುಭಾಷ ಶೆಟ್ಟೆಪ್ಪ ವಾಜಂತ್ರಿ (38) ಬಂಧಿತರು. ಕ್ಯಾಂಪ್ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದ್ದ ಗಂಗಾರಾಮ ಸಿಂಗನಗುಡಿ ಸಿಕ್ಕಿ ಬಿದ್ದಿದ್ದಾನೆ. ₹56.50 ಸಾವಿರ ಮೌಲ್ಯದ 1 ಕೆ.ಜಿ 130 ಗ್ರಾಂ ಗಾಂಜಾವನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಸುನೀಲ ಎಂಬಾತರಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಿ ಬಾಯಿಬಿಟ್ಟಿದ್ದು, ಇಬ್ಬರ ವಿರುದ್ಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ, ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಸುಭಾಷ ವಾಜಂತ್ರಿಯನ್ನು ಉದ್ಯಮಬಾಗ ಠಾಣೆ ಪೊಲೀಸರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-21-1397240383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.