ಬುಧವಾರ, ಅಕ್ಟೋಬರ್ 5, 2022
26 °C

ಜೈಲಿನಿಂದಲೇ ಸಾಮಾನ್ಯ ಸಭೆಗೆ ಹಾಜರಾದ ಸಂಕೇಶ್ವರ ಪುರಸಭೆ ಸದಸ್ಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಕೇಶ್ವರ (ಬೆಳಗಾವಿ ಜಿಲ್ಲೆ): ಕೊಲೆ ಆರೋಪದಡಿ ಜೈಲು ಸೇರಿರುವ ಸಂಕೇಶ್ವರ ಪುರಸಭೆಯ ಸದಸ್ಯರೊಬ್ಬರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಾಮಾನ್ಯ ಸಭೆಗೆ ಹಾಜರಾಗಿ ಗಮನ ಸೆಳೆದರು.

ಸಂಕೇಶ್ವರದ 14ನೇ ವಾರ್ಡ್‌ ಸದಸ್ಯ ಉಮೇಶ ರಮೇಶ ಕಾಂಬಳೆ ಅವರು ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪದ ಮೇಲೆ, ಎಂಟು ತಿಂಗಳಿನಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆದರೂ ನ್ಯಾಯಾಲಯದ ಅನುಮತಿ ಪಡೆದು ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು, ತಮ್ಮ ವಾರ್ಡ್‌ನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.

‘ಬುಧವಾರ (ಸೆ.21) ಪುರಸಭೆಯ ಸಾಮಾನ್ಯ ಸಭೆ ನಿಗದಿಯಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಉಮೇಶ ಅವರು ನ್ಯಾಯಾಲಯಕ್ಕೆ ಕೋರಿದ್ದರು. ಕೇಂದ್ರ ಕಾರಾಗೃಹದಿಂದಲೇ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆಗೆ ಹಾಜರಾಗಲು ಅವಕಾಶ ಸಿಕ್ಕಿತ್ತು. ಅದರಂತೆ ಪುರಸಭೆಯಲ್ಲಿ ವ್ಯವಸ್ಥೆ ಮಾಡಿದ್ದೆವು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು