ಸಂಕೇಶ್ವರ: ಪಟ್ಟಣದಲ್ಲಿ ಫೆ. 23ರಂದು ರಾತ್ರಿ ದತ್ತಾತ್ರೇಯ ಶ್ರೀಕಾಂತ ಥೋರವತ್ ಎಂಬುವರ ಮೇಲೆ ನಡೆದ ತಲ್ವಾರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕೇಶ್ವರ ಪೋಲಿಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಮಹಾರಾಷ್ಟದ ಇಚಲಕರಂಜಿಯ ಬಾಳು ಅನಿಲ ಖಾರತ್ (19) ಮತ್ತು ಇನ್ನೊರ್ವ ಬಾಲಾಪರಾಧಿ ಎಂದು ಗುರುತಿಸಲಾಗಿದೆ.

ಈಗಾಗಲೇ ಏಳು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಬಾಳು ಖಾರತ್ ಹಾಗೂ ಓರ್ವ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಘಟನೆಯ ಮುಂದಾಳತ್ವದ ವಿಚಾರದಲ್ಲಿ ಉಂಟಾದ ವೈಷಮ್ಯವೇ ಹಲ್ಲೆಗೆ ಕಾರಣವಾಗಿರುವ ಸಾಧ್ಯತೆ ಇದೆ.

ಈ ಹಿನ್ನಲೆಯಲ್ಲಿ ಪ್ರಕರಣಕ್ಕೆ ಸಂಬಧಿಸಿದ ಎಲ್ಲಾ ಆಯಾಮಗಳನ್ನು ಪೋಲಿಸರು ಪರಿಶೀಲಿಸುತ್ತಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲ್ಪಟ್ಟಿದ್ದು, ಬಂಧಿತರ ಸಂಖ್ಯೆ 9ಕ್ಕೆ ಏರಿದೆ, ತನಿಖೆ ಮುಂದುವರೆದಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.