ಸಂಕೇಶ್ವರ: ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜೂನ್ 30ರಿಂದ ಜುಲೈ 29ರ ವರೆಗೆ ತಾಲೂಕಿನಲ್ಲಿ ಮೂರನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯ ನಡೆಯಲಿದ್ದು, ಪ್ರಕ್ರಿಯೆ ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಶಾಸಕ ನಿಖಿಲ ಕತ್ತಿ ಕೋರಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ ಮತಗಟ್ಟೆ ಅಧಿಕಾರಿಗಳು (ಬಿಎಲ್ಓ) ಹಾಗೂ ವಿವಿಧ ಪಕ್ಷಗಳ ಬಿಎಲ್ಎಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರು ತಮ್ಮ ಹೆಸರು, ವಿಳಾಸದ ನವೀಕರಣಕ್ಕೆ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಒದಗಿಸಬೇಕು ಎಂದು ಮನವಿ ಮಾಡಿದರು.

ಕ್ಷೇತ್ರದ ಗ್ರಾಮೀಣ ಭಾಗದ ಜನತೆಯ ದಶಕಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ₹265 ಕೋಟಿ ಅಂದಾಜು ವೆಚ್ಚದ ನೂತನ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಇದರಡಿ ತಾಲೂಕಿನ 72 ಹಳ್ಳಿಗಳಿಗೆ ನೀರು ತಲುಪಲಿದೆ ಎಂದರು.

ಸಂಕೇಶ್ವರದ ಐತಿಹಾಸಿಕ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತರ ಸುಗಮ ಸಂಚಾರಕ್ಕಾಗಿ ದೇವಿಯ ಮೆರವಣಿಗೆ ಸಾಗುವ ಪಟ್ಟಣದ ರಸ್ತೆಗಳನ್ನು ತುರ್ತಾಗಿ ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಗಜಾನನ ಕ್ವಳ್ಳಿ, ಶಿವಾನಂದ ಮುಡಶಿ, ಪ್ರಮುಖರಾದ ಸುನೀಲ ಪರ್ವತರಾವ, ಪ್ರಶಾಂತ ಪಾಟೀಲ, ಆನಂದ ಸಂಸುದ್ದಿ, ರೋಹನ ನೇಸರಿ, ಹರುಣ ಮುಲ್ಲಾ, ಚೇತನ್ ಬಶೆಟ್ಟಿ, ಸಾಗರ ಜಕಾತಿ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಅಭಿಯಂತ ರವೀಂದ್ರ ಗಡಾದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-21-555643100

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.