ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಂತ ಸೇವಾಲಾಲ್ ತತ್ವ ಅಳವಡಿಸಿಕೊಳ್ಳಿ’

Published 15 ಫೆಬ್ರುವರಿ 2024, 16:08 IST
Last Updated 15 ಫೆಬ್ರುವರಿ 2024, 16:08 IST
ಅಕ್ಷರ ಗಾತ್ರ

ಬೆಳಗಾವಿ: ‘ಸಂತ ಸೇವಾಲಾಲ್‌ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕನ್ನಡ ಹೋರಾಟಗಾರ ಅನಂತಕುಮಾರ ಬ್ಯಾಕೋಡ ಹೇಳಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಗುರುವಾರ ನಡೆದ ಸಂತ ಸೇವಾಲಾಲ್‌ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರ್‌.ರಾಮಾನಾಯ್ಕ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಬಂಜಾರ ಸಮಾಜದ ಅಧ್ಯಕ್ಷ ಮಾನಪ್ಪ ರಾಠೋಡ, ಮಲ್ಲೇಶ ಚೌಗಲೆ, ಕಿರಣ ನಾಯ್ಕ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ಸಂಚರಿಸಿತು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT