ಶುಕ್ರವಾರ, ಫೆಬ್ರವರಿ 26, 2021
19 °C

ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಸತೀಶ ಜಾರಕಿಹೊಳಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಿ, ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ’ ಎಂದು ದೂರಿದರು.

‘ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸೌಧ ನಿರ್ಮಿಸಲಾಗಿದೆ. ಆದರೆ, ಬಳಸಿಕೊಳ್ಳಲು ಕ್ರಮವಾಗಿಲ್ಲ. ಆಗಾಗ ಇಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು. ಸಚಿವರು ಬಂದಾಗ ಅಲ್ಲೇ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಮುಖ್ಯಮಂತ್ರಿಯನ್ನೆ ಬದಲಿಸಿ ಅಥವಾ ಸಚಿವ ಸ್ಥಾನದಿಂದ ಯಾರನ್ನಾದರೂ ಕೈಬಿಡಲಿ. ಅದು ಬಿಜೆಪಿಯ ಆಂತರಿಕ ವಿಚಾರ. ಆದರೆ, ಈ ಸರ್ಕಾರದ ಜನ ವಿರೋಧಿ ನೀತಿಯ ಬಗ್ಗೆ ಹೋರಾಟ ಮುಂದುವರಿಸುತ್ತೇವೆ’ ಎಂದರು.

‘ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಮಿಷನ್–2023 ಆರಂಭಿಸಿದ್ದೇವೆ. ಮುಂದಿನ ಚುನಾವಣೆ ಎದುರಿಸಲು ಪಕ್ಷ ಸಂಘಟನೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.