ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿರು ಶಾಲು ಹೊದ್ದು ನಾಮಪತ್ರ ಸಲ್ಲಿಸಿದ ಸತೀಶಗೆ ಡಿಕೆಶಿ, ಸಿದ್ದರಾಮಯ್ಯ ಸಾಥ್

Last Updated 29 ಮಾರ್ಚ್ 2021, 10:28 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಯಾವುದೇ ಮೆರವಣಿಗೆ ಇರಲಿಲ್ಲ. ಸಂಗೊಳ್ಳಿರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರಗೆ ವಾಹನಗಳಲ್ಲಿ ಮುಖಂಡರೊಂದಿಗೆ ಬಂದ ಅವರು, ಹಸಿರು ಶಾಲು ಹೊಂದುಕೊಂಡು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಜೊತೆ ತೆರಳಿ ನಾಮಪತ್ರ ಸಲ್ಲಿಸಿದರು.

2ನೇ ಸೆಟ್‌ ಅನ್ನು ಶಾಸಕರಾದ ಎಂ.ಬಿ. ಪಾಟೀಲ ಹಾಗೂ ದೇಶಪಾಂಡೆ, ಇನ್ನೊಂದನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹಾಗೂ ಮುಖಂಡ ಫಿರೋಜ್‌ ಸೇಠ್‌, ಮತ್ತೊಂದು ಸೆಟ್‌ ಅನ್ನು ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್‌ ಮತ್ತು ಮಹಾಂತೇಶ ಕೌಜಲಗಿ ಅವರೊಂದಿಗೆ ಸಲ್ಲಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಸ್ವೀಕರಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮುಖಂಡರು ಹೊರಗಡೆ ಶಕ್ತಿ ಪ್ರದರ್ಶಿಸಿದರು. ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಶಾಸಕರಾದ ಎಚ್‌.ಕೆ. ಪಾಟೀಲ, ಜಮೀರ್‌ ಅಹಮದ್ ಖಾನ್, ಗಣೇಶ ಹುಕ್ಕೇರಿ, ರಾಮಲಿಂಗಾರೆಡ್ಡಿ, ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆ‍ಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಮುಖಂಡ ಅಶೋಕ ಪಟ್ಟಣ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮಾಳಗಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಇದ್ದರು.

ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ವಿರುದ್ಧ ಭಾನುವಾರ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದರಿಂದಾಗಿ, ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್‌ ಭವನ, ಜಿಲ್ಲಾಧಿಕಾರಿ ಕಚೇರಿ ಹಾಗೂ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿತ್ತು. ಡಿಕೆಶಿ ವಾಹನಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಖುದ್ದು ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಹಾಗೂ ಡಿಸಿಪಿ ವಿಕ್ರಂ ಅಮಟೆ ರಸ್ತೆಗಿಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT