ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘರ್ಷ ತಡೆಗೆ ಸರ್ಕಾರ ಕ್ರಮ ಕೈಗೊಳ್ಳಲಿ: ಸತೀಶ ಜಾರಕಿಹೊಳಿ

Last Updated 8 ಫೆಬ್ರುವರಿ 2022, 12:10 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್- ಕೇಸರಿ ಶಾಲು ಸಂಘರ್ಷ ನಡೆಯುತ್ತಿದ್ದು, ಇದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೋರಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಈ ಸಂಘರ್ಷಕ್ಕೆ ಬಿಜೆಪಿ ಸರ್ಕಾರವೇ ಕಾರಣ. ಕಾಂಗ್ರೆಸ್‌ ಅಧಿಕಾರದಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ’ ಎಂದರು.

‘ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಸರ್ಕಾರ ಎನು ಮಾಡುತ್ತಿದೆ? ಹಿಜಾಬ್‌– ಕೇಸರಿ ಶಾಲು ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ ಸಂಗತಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT